Breaking News

ಕಾವೇರಿ ನದಿ ನೀರು ವಿಚಾರ: ಸಿಎಂ ಸಿದ್ಧರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ ಕಿಚ್ಚ ಸುದೀಪ್!

ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೇ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ನ್ಯಾಯಾಧಿಕರಣ ಮತ್ತು ಕೇಂದ್ರ ಸರಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಕೊಡಬೇಕಿದೆ.

ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬರೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *