ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ

ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದೆ. ಅವರಿಗೆ ಬೆಳಗ್ಗಿನ ಉಪಹಾರಕ್ಕೆ ರೈಸ್ ಬಾತ್ ನೀಡಲಾಗಿತ್ತು. ಈ ವೇಳೆ ಪೊಲೀಸ್ ಆ ಪೊಕೇಟ್ ಓಪನ್ ಮಾಡಿದಾಗ ಸತ್ತ ಇಲಿಯನ್ನು ಕಂಡು ಗಾಬರಿಯಾಗಿದ್ದಾರೆ. ಪೊಲೀಸರಿಗೆ ‘ಇಲಿ’ ಇರುವ ಉಪಹಾರ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.ಯಶವಂತಪುರದಲ್ಲಿರುವ ಅಶೋಕ್ ಟಿಫಿನ್ಸೆಂ

ಟರ್‌ನಲ್ಲಿ ಒಟ್ಟು 180 ಜನಕ್ಕೆ ತಿಂಡಿಯನ್ನು ಸಿದ್ಧಪಡಿಸಿಲಾಗಿತ್ತು. ಬೆಳಗ್ಗೆ 7-30ಕ್ಕೆ ತಿಂಡಿಯನ್ನು ವಿತರಿಸಲಾಗಿದೆ. ಈ ವೇಳೆ ಸಿಬ್ಬಂದಿಯೊಬ್ಬರು ಪ್ಯಾಕೆಟ್ ತೆರೆದಾಗ ಇಲಿ ಪತ್ತೆಯಾಗಿದೆ. ಕೂಡಲೇ ತಮ್ಮ ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ತಿಂಡಿ ತಿನ್ನದಂತೆ ಇತರೆ ಸಿಬ್ಬಂದಿಗೆ ತಿಳಿಸಿದ್ದಾರೆ. ಹೀಗಾಗಿ ಯಾವ ಸಿಬ್ಬಂದಿ ತಿಂಡಿ ಸೇವಿಸಿಲ್ಲ. ಇದರಿಂದ ಆಗಬಹುದಾದ ಅನುಹಾತವೊಂದು ತಪ್ಪಿದೆ ಎನ್ನಲಾಗಿದೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

