ಬೆಂಗಳೂರು: ನಾಳೆ ಕರ್ನಾಟಕ ಬಂದ್- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್ ಯಶಸ್ವಿಯಾದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳ ಒಕ್ಕೂಟದ ಕರೆ ಮೇರೆಗೆ ಸೆ. 29ರ ಶುಕ್ರ ವಾರ ಕರ್ನಾಟಕ ಬಂದ್ ನಡೆಯಲಿದ್ದು, ಅಂದು ಇಡೀ ರಾಜ್ಯವ್ಯಾಪಿ ತುರ್ತು/ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಳ್ಳಲಿವೆ.
ಬಂದ್ ಹಿನ್ನೆಲೆಯಲ್ಲಿ ಅಂದು ನಡೆಯಬೇಕಾಗಿದ್ದ ಹಲವು ಪರೀಕ್ಷೆಗಳನ್ನು ಕಾಲೇಜುಗಳು ಹಾಗೂ ವಿವಿಗಳು ಮುಂದೂಡಿವೆ. ಖಾಸಗಿ ಕಾಲೇಜುಗಳು ರಜೆ ಘೋಷಿಸುವ ಸಾಧ್ಯತೆಗಳಿವೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದ ಬಗ್ಗೆ ಗುರುವಾರ ನಿರ್ಧಾರವಾಗಲಿದೆ. ಅಂದು ಆಟೋ, ಊಬರ್, ಟ್ಯಾಕ್ಸಿ, ಖಾಸಗಿ ವಾಹನಗಳು ರಸ್ತೆಗಿಳಿಯುವುದಿಲ್ಲ. ಹೀಗಾಗಿ ಸಂಚಾರ ಸಂಪೂರ್ಣ ಸ್ತಬ್ಧವಾಗಲಿದೆ. ಹೋರಾಟಗಾರರು ಹೆದ್ದಾರಿ ಬಂದ್ ಹಾಗೂ ರೈಲು ಸಂಚಾರಕ್ಕೆ ತಡೆ ಉಂಟುಮಾಡುವ ಸಾಧ್ಯತೆಗಳಿವೆ.
ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ 18 ದಿನಗಳ ಕಾಲ ಪ್ರತಿನಿತ್ಯ 3 ಸಾವಿರ ಕ್ಯುಸೆಕ್ ನೀರು ಹರಿಸಲು ಆದೇಶಿಸಿರುವುದು ಕನ್ನಡಿಗರನ್ನು ಕೆರಳಿಸಿದ್ದು, ಹೋರಾಟದ ಕಿಚ್ಚನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಅಲ್ಲದೆ ಜೆಡಿಎಸ್, ಬಿಜೆಪಿ ಕೂಡ ಬೆಂಬಲ ವ್ಯಕ್ತಪಡಿಸಿವೆ. ಮತ್ತೂಂದೆಡೆ 3 ದಿನಗಳ ಅಂತರದಲ್ಲಿ ಎರಡು ಬಂದ್ ಸಾಧ್ಯವಿಲ್ಲ ಎಂದು ಬೆಂಗಳೂರು ಬಂದ್‌ಗೆ ಸಹಕಾರ ನೀಡದ ಹೊಟೇಲ್ ಮಾಲಕರ ಸಂಘ, ಓಲಾ, ಊಬರ್ ಚಾಲಕರು ಮತ್ತು ಮಾಲಕರ ಸಂಘ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸಹಿತ ಕೆಲವು ಸಂಘಟನೆಗಳು ಶುಕ್ರವಾರದ ಬಂದ್‌ಗೆ ಸಹಕಾರ ನೀಡಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





