ಏಕದಿನ ವಿಶ್ವಕಪ್ 2023 ಪಂದ್ಯಾವಳಿಗೆ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಭಾರತದ ಏಷ್ಯಾ ಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ವಿಶ್ವಕಪ್ ಆರಂಭಕ್ಕೆ ಮುನ್ನ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಅವರನ್ನು ತಂಡದಿಂದ ಕೈಬಿಡಲಾಗಿದೆ.
ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಅನುಭವಿ ಆಟಗಾರ ಅಶ್ವಿನ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಮೊದಲಿನಿಂದ ಒತ್ತಾಯಿಸಿದ್ದರು ಈಗ ಅವರು ವಿಶ್ವಕಪ್ ತಂಡವನ್ನು ಸೇರಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





