Breaking News

ಹೋರಾಟಗಾರರೊಬ್ಬರು ರಕ್ತವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತ….

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಕನ್ನಡಪರ ಸಂಘಟನೆಯ ಹೋರಾಟಗಾರರೊಬ್ಬರು ರಕ್ತ ಕೊಡ್ತೀವಿ, ನೀರು ಕೊಡುವುದಿಲ್ಲ ಎಂದು ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳಸ ತಾಲೂಕಿನಲ್ಲಿ ಪ್ರತಿಭಟನೆ ವೇಳೆ ಕನ್ನಡ ಹೋರಾಟಗಾರ ರಾಜು ಎಂಬುವವರು ನಂತರ ರಕ್ತ ಕೊಡ್ತೀವಿ, ನೀರು ಕೊಡಲ್ಲ ಎನ್ನುವ ಮೂಲಕ ಕೈ ಕೊಯ್ದುಕೊಂಡು ರಕ್ತವನ್ನು ರಸ್ತೆಗೆ ಚೆಲ್ಲಿ ರಾಜ್ಯ, ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಯನ್ನು ರೈತ ಸಂಘ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *