ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ ಎಂದರು. ಅಲ್ಲದೆ ಇದೇ ವೇಳೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೋಗಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





