Breaking News

ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ…..

ಕಾರವಾರ: ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೂ ಇದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಿ ಎಂದು ಈಗ ಬೇಡಿಕೆ ಇಡಲಾಗಿದೆ.

ಕೆಲವು ದಿನಗಳ ಹಿಂದೆ ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲಾಗಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲದೇ ಪ್ರಯಾಣಿಕರ ಬೇಡಿಕೆಯಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ರೈಲು ಈಗ 35 ನಿಮಿಷ ಮುಂಚಿತವಾಗಿ ಮುರುಡೇಶ್ವರ ತಲುಪುತ್ತದೆ.

ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರು ಸತೀಶ ಸೈಲ್ ಬೆಂಗಳೂರು-ಮುರುಡೇಶ್ವರ ರೈಲು ಕಾರವಾರ ತನಕ ವಿಸ್ತರಣೆ ಮಾಡಬೇಕು ಎಂದು ಕೊಂಕಣ ರೈಲ್ವೆ ಚೇರ್ಮನ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *