Breaking News

ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ: ಚಕ್ರವರ್ತಿ ಸೂಲಿಬೆಲೆ..

ಮಂಡ್ಯ: ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಸಖ್ಯೆ ಬೆಳಸಿ, ಕರ್ನಾಟಕದ ಕಾವೇರಿ ನೀರನ್ನು ರಾಜಕೀಯ ಹಿತಕ್ಕಾಗಿ ಬಿಡುಗಡೆ ಮಾಡಿ ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು.

ನಗರದ ಸರ್ ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಥವಾ ಪ್ರಾಧಿಕಾರ ಹೇಳಿದೇ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ನಡುವೆ ಕಾವೇರಿ ನದಿ ನೀರಿನ ವಿಚಾರವಾಗಿ ವಿವಾದ ಉಂಟಾಗಿದೆ. ಕಾವೇರಿ ಪ್ರಾಧಿಕಾರ ನೀರು ಬಿಡುವಂತೆ ಆದೇಶ ನೀಡಿತ್ತು. ಕಡಿಮೆ ನೀರು ಬಿಡುವಂತೆ ಆದೇಶ ನೀಡಿದೆ ಎಂಬ ಕಾರಣಕ್ಕೆ ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯ ಆದೇಶ ನೀಡುವ ಮುನ್ನವೇ ನೀರು ಬಿಟ್ಟಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *