ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ.
ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ.
ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಆಕ್ಷೇಪ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.