Breaking News

ಪಾಲಿಕೆ ಸಾಮಾನ್ಯ ಸಭೆ: ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇನ್ನೂ ಸಭೆ ಪ್ರಾರಂಭ ಆಗುತ್ತಿದಂತೆ ವಿಪಕ್ಷಗಳ ನಡುವೆ ವಾಗ್ವಾದ ಆರಂಭ ಆಗಿತ್ತು. ವಿಷಯಪಟ್ಟಿ ವಿಚಾರದಲ್ಲಿ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿತ್ತು. ವಾಗ್ವಾದ ನಡೆಯುತ್ತಲೇ ಸಭೆಯನ್ನು ಮೇಯರ್ ಮುಂದೂಡಿದ್ದು, ಕಾಲ ಹರಣ ಮಾಡುತ್ತಿದ್ದಾರೆಂದು ಪ್ರತಿಭಟನೆ ಆರಂಭಿಸಿದ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *