Breaking News

ಅಬಕಾರಿ ಇಲಾಖೆ ಮಹತ್ವದ ಮಾಹಿತಿ ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ

ಬೆಂಗಳೂರು;- ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸಂಬಂಧ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಅಬಕಾರಿ ಇಲಾಖೆ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚಿಂತಿಸಲಾಗಿದೆ ಮತ್ತು ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿರುವ ಬೆನ್ನಲ್ಲೇ ಅಬಕಾರಿ ಇಲಾಖೆಯು ‘ದಿ ಫೈಲ್’ಗೆ ನೀಡಿರುವ ಹಿಂಬರಹವು ಮುನ್ನೆಲೆಗೆ ಬಂದಿದೆ.

ನಗರ, ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಹೊಸದಾಗಿ ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಿಗೆ ನೀಡುವ ಸಂಬಂಧ ಸರಕಾರದಲ್ಲಿ ನಡೆದಿರುವ ಸಭೆಗಳು, ನಡಾವಳಿಗಳು ಮತ್ತು ಪ್ರಸ್ತಾವನೆಗಳನ್ನು ಒದಗಿಸಬೇಕು ಎಂದು ‘the-file.in’ 2023ರ ಸೆ.25ರಂದು ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಐದೇ ಐದು ದಿನದಲ್ಲಿ ಅಬಕಾರಿ ಇಲಾಖೆಯು ಹಿಂಬರಹ ನೀಡಿದೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *