Breaking News

ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಅಸಾಧ್ಯ -ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು.

ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ. ದೇಶ ಸೇವೆಗಾಗಿ ಸದಾ ದುಡಿಯುತ್ತಿರುವ ಮೋದಿ ಅವರನ್ನು ಕಳೆದುಕೊಳ್ಳಬಾರದು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನತೆ ಮೋದಿ ಅವರನ್ನು ಬೆಂಬಿಸುವ ಮೂಲಕ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ರಾಜ್ಯದಿಂದ ಆಯ್ಕೆ ಮಾಡಬೇಕು ಎಂದರು.

ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಯುವಕರು ದೇಶ ಭಕ್ತಿಯನ್ನು ಬೆಳೆಸಿಕೊಳ್ಳುವ ಮೂಲಕ ಸುಭದ್ರ ಭಾರತ ನಿರ್ಮಾಣಕ್ಕೆ ಮೋದಿ ಅವರ ಜೊತೆ ಕೈ ಜೋಡಿಸಬೇಕು. 2024ರ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Share News

About admin

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *