ಬೆಂಗಳೂರು;- ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ʼʼವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್‍ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.
ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ ಇಹಲೋಕ ತ್ಯಜಿಸಬೇಕು ಎಂದರು.
ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೆ ಹಿರಿಯರಿಗೆ ನಾವು ನೀಡುವ ಗೌರವ. ನಾವು, ನೀವೆಲ್ಲ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





