ದೆಹಲಿ: ಪ್ರತಿಯೊಬ್ಬರ ಪ್ರೀತಿಯ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಭಾರತದಾದ್ಯಂತ ಅಕ್ಟೋಬರ್ 2 ರಂದು ‘ಗಾಂಧಿ ಜಯಂತಿ’ ಎಂದು ಆಚರಿಸಲಾಗುತ್ತದೆ. ಆದರೆ ಪ್ರಪಂಚದಾದ್ಯಂತ ಇದನ್ನು ‘ಅಂತಾರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸಲಾಗುತ್ತದೆ. ಬಾಪು ಅವರ ಅಹಿಂಸಾತ್ಮಕ ಹೋರಾಟ ದೇಶದ ಸ್ವಾತಂತ್ರ್ಯಕ್ಕೆ ಮಹತ್ವದ ಕೊಡುಗೆ ನೀಡಿದೆ.
ಇದರ ಬೆನ್ನಲ್ಲೆ ಇಂದು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





