Breaking News

ಬಿಗ್ ಬಾಸ್ ಮನೆಗೆ ಹೋಗಲು ನಾಟಕವಾಡುವ ಅವಶ್ಯಕತೆ ಇಲ್ಲ: ವರ್ಷಾ..

ಈ ವರ್ಷದ ಬಿಗ್ ಬಾಸ್ (Bigg Boss Kannada) ಮನೆಗೆ ಖ್ಯಾತ ಯುಟ್ಯೂಬರ್ ಹಾಗೂ ಇನ್ಸ್ಟಾದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ವರ್ಷಾ-ವರುಣ್ (Varun Aradhya) ಜೋಡಿಯಾಗಿ ಬರುತ್ತಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ ಭಾಗವಹಿಸುವುದಕ್ಕಾಗಿಯೇ ಈ ಜೋಡಿ ಬ್ರೇಕ್ ಅಪ್ (Break Up) ನಾಟಕವಾಡಿದೆ ಎಂದು ಆರೋಪವಿತ್ತು. ಇದಕ್ಕೆ ವರ್ಷಾ ಕಾವೇರಿ ಸ್ಪಷ್ಟನೆಯನ್ನು ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಲು ನಾಟಕವಾಡುವ ಅವಶ್ಯಕತೆ ಇಲ್ಲವೆಂದು ಅವರು ಹೇಳಿಕೊಂಡಿದ್ದಾರೆ

ಖ್ಯಾತ ಯೂಟ್ಯೂಬರ್ಸ್, ಟಿಕ್ ಟಾಕ್ ಸ್ಟಾರ್ಸ್ ವರ್ಷಾ ಕಾವೇರಿ- ವರುಣ್ ಆರಾಧ್ಯ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ವರ್ಷಾ (Varsha Kaveri) ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದರು. ಈಗ ವರುಣ್ ಆರಾಧ್ಯ ಬ್ರೇಕಪ್ ಬಗ್ಗೆ ಮೌನ ಮುರಿದ್ದಾರೆ. ಬ್ರೇಕಪ್ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ರಿಯಾಕ್ಟ್ ಮಾಡಿದ್ದಾರೆ.

ಎಲ್ಲರಿಗೂ ನಮಸ್ಕಾರ ನೀವು ವರ್ಷಾ ಕಾವೇರಿ- ನನಗೆ ತೋರಿಸಿದ ಸಪೋರ್ಟ್‌ಗೆ ತುಂಬಾ ವಂದನೆಗಳು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಲಹೆ ಮತ್ತು ದೃಷ್ಟಿಕೋನವಿದೆ. ಹೀಗಾಗಿ ನಮ್ಮ ನಿರ್ಧಾರವನ್ನು ನೀವು ಒಪ್ಪಿಕೊಂಡು ನಮಗೆ ಸಪೋರ್ಟ್ ಮಾಡಬೇಕು. ವರ್ಷಾ- ನಾನು ಪರಸ್ಪರ ತೀರ್ಮಾನ ಮಾಡಿಕೊಂಡು ದೂರ ಆಗಿರುವುದಕ್ಕೆ ನಮ್ಮ ಸ್ನೇಹಿತರು ಅಥವಾ ನಮ್ಮ ಕುಟುಂಬದವರು ಕಾರಣವಲ್ಲ. ಅವರನ್ನು ಈ ವಿಚಾರದಲ್ಲಿ ಎಳೆಯಬೇಡಿ. ಒಳ್ಳೆಯ ರೀತಿಯಲ್ಲಿ ಸಂಬಂಧ ಶುರು ಮಾಡಿ, ಒಳ್ಳೆಯ ರೀತಿಯಲ್ಲಿ ಅಂತ್ಯವಾಡುತ್ತಿದ್ದೀವಿ. ವರ್ಷಾ ಕಾವೇರಿ ಮುಂದಿನ ಕೆಲಸಗಳಿಗೆ ಒಳ್ಳೆಯದಾಗಲಿ ಎಂದು ಹೇಳಲು ಇಷ್ಟ ಪಡುತ್ತೀನಿ. ಇಲ್ಲಿಯತನಕ ನೀವು ನೀಡಿದ ಪ್ರೋತ್ಸಾಹ ಮತ್ತು ಬೆಂಬಲ ಇನ್ನು ಮುಂದೆನೂ ಸದಾ ಇರಲಿ ಎಂದು ವರುಣ್ ಬರೆದುಕೊಂಡಿದ್ದರು. ಈ ಬೆನ್ನಲ್ಲೇ ನೆಟ್ಟಿಗರು ವರುಣ್‌ಗೆ ಕ್ಲಾಸ್‌ ತೆಗೆದುಕೊಂಡಿದ್ದರು. ವರ್ಷಾ ಗಿಫ್ಟ್‌ ಮಾಡಿದ ಬೈಕ್‌ನಲ್ಲಿ, ಡುಡ್ಡಿನಲ್ಲಿ ಶೋಕಿ ಮಾಡ್ತಿದ್ದೀರಾ. ಅದನ್ನು ಅವರಿಗೆ ವಾಪಾಸ್‌ ಕೊಡಿ. ಪ್ರೀತಿಗೆ ಮೋಸ ಮಾಡಿ ಇನ್ನೊಬ್ಬರ ಹಿಂದೆ ಹೋಗಿದ್ದೀರಾ ಥೂ ಎಂದೆಲ್ಲಾ ಕಾಮೆಂಟ್‌ ಮಾಡಿದ್ದರು

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *