Breaking News

ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ….

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *