ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವತಃ ಶಾಸಕರೇ ದಿನಕ್ಕೊಬ್ಬರಂತೆ ಬೀದಿಗಿಳಿದು ಅಸಮಾಧಾನ ಹೊರ ಹಾಕುವ ಮಟ್ಟಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್‌ನ ಕಾಗವಾಡ ಶಾಸಕ ರಾಜು ಕಾಗೆ ಅವರು, ಮೊನ್ನೆಯಷ್ಟೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಈ ಸಂಬಂಧ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿಯು ರಾಜ್ಯ ಸರ್ಕಾರದ ಆಡಳಿತ ಕಾರ್ಯ ನಿರ್ವಹಣೆ ಬಗ್ಗೆ ವ್ಯಂಗ್ಯವಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





