Breaking News

ಶುಭ್ಮನ್ ಗಿಲ್ ಅವರ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು….

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 202 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ವೇಳೆ ಭಾರತದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಗಮನಾರ್ಹ ಸಾಧನೆ ಮಾಡಿದರು.ಯಶಸ್ವಿ ಜೈಸ್ವಾಲ್ 21 ವರ್ಷ 9 ತಿಂಗಳು ಮತ್ತು 13 ದಿನಗಳ ವಯಸ್ಸಿನಲ್ಲಿ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸುವ ಮೂಲಕ, 23 ವರ್ಷ ಮತ್ತು 146 ದಿನಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ್ದ ಶುಭ್ಮನ್ ಗಿಲ್ ಅವರ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *