Breaking News

ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ…..

ಬೀದರ್‌: ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂಬ ಕೂಗಿನ ನಡುವೆಯೇ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಹೌದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮೋದಿ ಬೀದರ್‌ಗೆ ಆಗಮಿಸಲಿದ್ದಾರೆ. ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರಕ್ಕೆ ಮಂಗಳವಾರ ಮಧ್ಯಾಹ್ನ 1.50ಕ್ಕೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ಜಿಲ್ಲಾಡಳಿತ ಡ್ರೋನ್ ಹಾರಾಟ ನಿಷೇಧಿಸಿದೆ. ನರೇಂದ್ರ ಮೋದಿ ಭದ್ರತೆಯ ಶಿಷ್ಟಾಚಾರದಂತೆ ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರ, ಬೀದರ್ ನಗರದ ಸುತ್ತಮುತ್ತಲಿನ 3 ಕಿ. ಮೀ. ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 6 ರಿಂದ ರಾತ್ರಿ 10ರ ತನಕ ಜನರು ಡ್ರೋನ್ ಹಾರಾಟ ನಡೆಸುವುದನ್ನು ನಿರ್ಬಂಧಿಸಲಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *