Breaking News

ಯುವ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು…

ಮಂಗಳೂರು:ಕರ್ತವ್ಯದ ಮೇಲಿದ್ದಾಗ ಹೆಡ್ ಕಾನ್ಸಟೇಬಲ್ ರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್​ಟೇಬಲ್ ಸೇಮನಗೌಡ ಚೌಧರಿ ಮೃತಪಟ್ಟವರಾಗಿದ್ದಾರೆ.ಮೂಲತಃ ವಿಜಯಪುರದರಾದ ಸೋಮನಗೌಡ ಚೌಧರಿ 2016 ರ ಬ್ಯಾಚ್‌ನ ಸಿಬ್ಬಂದಿಯಾಗಿ ಸೇವೆಗೆ ಸೇರಿಕೊಂಡಿದ್ದರು.ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದ ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದಿದ್ದರು.ಇದೀಗ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ರ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು ಮೂರು ವರ್ಷಗಳ ಹಿಂದೆ ಅವರಿಗೆ

ವಿವಾಹವಾಗಿತ್ತು.ಕರ್ತವ್ಯದಲ್ಲಿದ್ದ ಸೋಮನಗೌಡ ಅವರು ನಗರದ ಮಳಿಗೆಯೊಂದಕ್ಕೆ ತೆರಳಿದ್ದರು ಈ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆಂದು ತಪಾಸಣೆ ನಡೆಸಿದ ವೈದ್ಯರು ತಿಳಿಸಿದ್ದಾರೆಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್, ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿ ಸಿಬ್ಬಂದಿ ವರ್ಗವು ಸೋಮನಗೌಡ ಅವರ ಮೃತದೇಹಕ್ಕೆ ಅಂತಿಮ ಗೌರವ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ನಂತರ ತವರು ಜಿಲ್ಲೆ ವಿಜಯಪುರಕ್ಕೆ ಮೃತದೇಹವನ್ನು ಕಳುಹಿಸಿ ಕೊಡಲಾಗಿದೆ.

Share News

About Shaikh BigTv

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *