ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎಸ್‌ಕೌಂಟರ್ ಮಾಡಬೇಕು ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ
ಹೊನ್ನಾಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣವನ್ನು ಹಾಲಿ ನ್ಯಾಯಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಗಾಗೆಯೇ ಹಿಂದೂಗಳ ಮನೆಗಳು ಜಖಂ ಆಗಿದ್ದು, ಕೂಡಲೇ ಅವರಿಗೆ ಪರಿಹಾರ ನೀಡಿ ಅವರ ನೆರವಿಗೆ ಧಾವಿಸಬೇಕು. ರಾಜ್ಯ ಸರ್ಕಾರವೇ ಮುಸ್ಲಿಂರ ತುಷ್ಟೀಕರಣಕ್ಕೆ ಮುಂದಾಗಿದ್ದು. ಇದರಿಂದ ಪ್ರಚೋದನೆಗೆ ಒಳಗಾದ ಕೆಲ ಪುಂಡರು ಈ ರೀತಿಯ ಕೃತ್ಯವೆಸಗಿದ್ಧಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





