Breaking News

ಖಾಲಿ ಟೀನ್‌ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ…

ಚಾಮರಾಜನಗರ: ರಾಜ್ಯ ಸರ್ಕಾರವು‌ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್‌ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್‌ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ ಮಂಡಳಿ ,ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *