Breaking News

ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮ…

ಹುಬ್ಬಳ್ಳಿ:ದಿ.ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮವನ್ನು ಶ್ರೀ ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ವತಿಯಿಂದ ಅಕ್ಟೋಬರ್ ೭ ಹಾಗೂ ೮ ರಂದು ಸಂಜೆ ೮ ಗಂಟೆಗೆ ಕುಂದಗೋಳ ಪಟ್ಟಣದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಿ‌.ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ಚೇರ್ಮನ್ ಅರವಿಂದ್ ಕಟಗಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳವರೆಗೆ ಆಹೋರಾತ್ರಿ ಸಂಗೀತೋತ್ಸವ ಕಾರ್ಯಕ್ರಮ ಜರುಗಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿ.ಸವಾಯಿ ಗಂಧರ್ವ ಸ್ಮಾರಕ ‌ವಿಶ್ವಸ್ಥ ಸಂಸ್ಥೆಯ ಚೇರ್ಮನ್ ಅರವಿಂದ್ ಕಟಗಿ ವಹಿಸಲಿದ್ದು, ಉದ್ಘಾಟನೆಯನ್ನು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ನೆರವೇರಿಸಲಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಗಾಯಕರಾದ ಪಂ.ರಾಜಾ ಕಾಳೆಯವರಿಗೆ ಸವಾಯಿ ಗಂಧರ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದ ಅವರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶಾಸಕರಾದ ಎಂ.ಆರ್.ಪಾಟೀಲ್, ಮಾಜಿ ಶಾಸಕರಾದ ಕುಸುಮಾವತಿ ಶಿವಳ್ಳಿ, ಎಸ್. ಐ.ಚಿಕ್ಕನಗೌಡ್ರ, ಎಂ.ಎಸ್.ಅಕ್ಕಿ, ಮಾಜಿ ಸಂಸದರಾದ ಐ.ಜಿ.ಸನದಿ, ಕನ್ನಡ ಮತ್ತಿ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಸೇರಿದಂತೆ ಮೊದಲಾದವರು ಆಗಮಿಸಲಿದ್ದಾರೆಂದರು. ಪತ್ರಿಕಾಗೋಷ್ಠಿಯಲ್ಲಿ ಮುತ್ತಣ್ಣ ತಡಸೂರ, ಅರ್ಜುನ್ ನಾಡಗೇರ್, ಅಶೋಕ ನಾಡಗೇರ್, ಅರವಿಂದ್ ಬ್ಯಾಹಟ್ಟಿ, ಜಿತೇಂದ್ರ ಕುಲಕರ್ಣಿ ಉಪಸ್ಥಿತರಿದ್ದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *