ಧಾರವಾಡ : ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹಾಗೂ ನವಲಗುಂದ ರಸ್ತೆಯಲ್ಲಿ ಸೋಮಾಪೂರ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.
ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದ ಸುರೇಶ ಎಂಬಾತನೆ ಸ್ಥಳದಲ್ಲಿಯೇ ಮೃತಪಟ್ಟವನೆಂದು ಗುರುತಿಸಲಾಗಿದೆ.
ರಾಯಚೂರ ಜಿಲ್ಲೆಯ ಸಿಂಧನೂರಿನಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಇದರಿಂದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





