Breaking News

ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ….

ಧಾರವಾಡ : ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಧಾರವಾಡದ ವಿದ್ಯಾರ್ಥಿಗಳಾದ ಕು.ಸುಬ್ರಹ್ಮಣ್ಯ ತೋಳಮಟ್ಟಿ, .ದಾನೇಶ್ ಎಂ.ವಿ. ಹಾಗೂ ಆದಿತ್ಯ ಜನಾದ್ರಿ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಆಶುಭಾಷಣ ಸ್ಪರ್ಧೆಯಲ್ಲಿ ಕು.ಶ್ರೇಯಸ್ ಯಮಕನಮರಡಿ  ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ.
 ಶಾಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಅಂಬೇಕರ್, ಪ್ರಾಚಾರ್ಯರಾದ ಡಾ. ಅನಿತಾ ರೈ, ಆಡಳಿತಾಧಿಕಾರಿಗಳಾದ ಕುಮಾರಸ್ವಾಮಿ ಕುಲಕರ್ಣಿ ಹಾಗೂ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗದವರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *