Breaking News

ಈಶ್ವರಿ ಫೌಂಡೇಶನ್ ವತಿಯಿಂದ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ 8 ರಂದು ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ

ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಸಂತೋಷ್ ವರ್ಣೇಕರ ವಹಿಸಲಿದ್ದಾರೆಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ವಿ.ಪ.ಸದಸ್ಯ ಪ್ರದೀಪ್ ಶೆಟ್ಟರ್, ಮಾಜಿ ಮಹಾಪೌರರಾದ ವೀರಣ್ಣ ಸವಡಿ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್, ಮುಖಂಡರಾದ ರಮೇಶ ಮಹಾದೇವಪ್ಪನವರ, ಗಣೇಶ್ ಮಳಲಿಕರ, ಸಂತೋಷ್ ಆರ್ ಶೆಟ್ಟಿ, ಗುರು ಹಿರೇಮಠ ಸೇರಿದಂತೆ ಮೊದಲಾದವರು ಆಗಮಿಸಲಿದ್ದಾರೆಂದರು.

ಉತ್ತರ ಕರ್ನಾಟಕದ ಅತ್ಯುತ್ತಮ ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸಿ ಕಲಾಪೋಷಣೆ ಮಾಡಬೇಕೆಂಬ ಆಶಯದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಎಸ್.ಪಿ.ಬಿ ಹಾಡಿದ ಕನ್ನಡ, ಹಿಂದಿ, ತೆಲಗು ಮತ್ತು ತಮಿಳು ಚಿತ್ರದ ಹಾಡುಗಳನ್ನು ಪ್ರಸ್ತುತಪಡಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ರಾಮದುರ್ಗಕರ, ರಮೇಶ್ ಮಹಾದೇವಪ್ಪನವರ, ವಿರೇಶ್ ಉಪ್ಪಿನ ಉಪಸ್ಥಿತರಿದ್ದರು.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *