ಬೆಂಗಳೂರು: ಬಹುನಿರೀಕ್ಷಿತ ನಾನ್ ಎಸಿ ‘ಪಲ್ಲಕ್ಕಿ’ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು. ಪಲ್ಲಕ್ಕಿ’ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





