Breaking News

ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು…

2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು.

ಆದರೂ, ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಪ್ರದರ್ಶನ ಆಧಾರದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಅಫ್ಘಾನಿಸ್ತಾನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 18.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದಾಗ ಮಳೆ ಆಟಕ್ಕೆ ಅಡ್ಡಿಪಡಿಸಿತು. ಬಿಟ್ಟುಬಿಡದೆ ಮಳೆ ಸುರಿದ ಕಾರಣ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *