ಹೈದರಾಬಾದ್: ಇನ್ನೆರಡು ತಿಂಗಳಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷಕ್ಕೆ ಕಾಂಗ್ರೆಸ್‌ನಿಂದ ತೀವ್ರ ಪೈಪೋಟಿ ಎದುರಾಗಿದೆ. ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ ತೆಲಂಗಾಣದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೌಪ್ಯ ಕಾರ್ಯತಂತ್ರ ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೈದರಾಬಾದ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತೆಲಂಗಾಣ ಚುನಾವಣಾ ನಿರ್ವಹಣೆ ಮತ್ತು ಕಾರ್ಯತಂತ್ರದ ಯೋಜನೆಗಳ ಮೇಲ್ವಿಚಾರಣೆಗಾಗಿ ಡಿಕೆ ಶಿವಕುಮಾರ್ ಅವರು ಸುಮಾರು ಒಂದು ತಿಂಗಳು ಹೈದರಾಬಾದ್‌ನಲ್ಲಿ ಕಳೆಯುವ ಸಾಧ್ಯತೆಯಿದೆ. ಪಕ್ಷದ ಚುನಾವಣಾ ನಿರ್ವಹಣೆ ಪ್ರಕ್ರಿಯೆಯ ಮೇಲೆ ಸಂಪೂರ್ಣ ಹಿಡಿತವನ್ನು ಡಿಕೆಶಿ ಹೊಂದಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಗೆಲುವಿನ ಹಾದಿಯನ್ನು ಅವರೇ ರೂಪಿಸಲಿದ್ದಾರೆ ಎಂದು ಕಾಂಗ್ರೆಸ್‌ನ ಬಲ್ಲ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





