ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗವನ್ನು ಹತೋಟಿ ಮಾಡಿ ತೋಟವನ್ನು ಉಳಿಸಿಕೊಳ್ಳಲು ಹಲವಾರು ಔಷಧಿಗಳ ಮೊರೆ ಹೋಗಿದ್ದಾರೆ. ಸರ್ಕಾರ ರೈತರಿಗೆ ನೀಡಿದ್ದ ಎಲ್ಲಾ ಭರವಸೆಗಳು ಹುಸಿಯಾಗಿವೆ.
ಕೇಂದ್ರಿಯ ತೋಟದ ಬೆಳಗಳ ಸಂಶೋಧನಾ ಸಂಸ್ಥೆ, ಪ್ರಾಂತೀಯ ಕ್ಷೇತ್ರ ವಿಟ್ಲ, ಕರ್ನಾಟಕ ಅಡಿಕೆ ಬೆಳೆಗೆ ಕಾಡುವ ಎಲೆಚುಕ್ಕೆ ರೋಗದ ನಿರ್ವಹಣೆ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ರೈತರು ಈ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಮೂಲಕ ಹತೋಟಿ ಮಾಡಬಹುದು.
ಎಲೆಚುಕ್ಕೆ ರೋಗವನ್ನು ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಕಾಣಬಹುದು. ಕೆಳಭಾಗದ ಒಂದೆರಡು ಎಲೆಗಳಲ್ಲಿ ಚುಕ್ಕೆಗಳಿರುತ್ತವೆ. ಇತ್ತೀಚೆಗೆ ಈ ರೋಗವು ಹಲವೆಡೆ ಗಂಭೀರ ಸ್ವರೂಪವನ್ನು ಪಡೆದಿದೆ. ತಕ್ಷಣ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದದ್ದು ಅನಿವಾರ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





