Breaking News

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ….

ಬೆಂಗಳೂರು: ಸೋಮವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ವರದಿಯಾಗಿದೆ.

ಸೋಮವಾರ ಸಂಜೆ ಸುರಿದ ಮಳೆಯು ಮಂಗಳವಾರವೂ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.

ಸೋಮವಾರ ಸುರಿದ ಮಳೆಗೆ ರಸ್ತೆಗಳಲ್ಲಿ ಮರಗಳ ಕೊಂಬೆ ರೆಂಬೆಗಳು ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ದೂರುಗಳು ಬಂದಿವೆ. ಈ ಬಗ್ಗೆ ತ್ವರಿತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಬಿಬಿಎಂಪಿಯನ್ನು ಒತ್ತಾಯಿಸಿದೆ.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *