Breaking News

ಕಾರ್ಮಿಕರ ಕಾಯ್ದೆ, ಕಾನೂನಿನನ್ವಯ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಹಿತರಕ್ಷಣೆಗೆ ಸರ್ಕಾರವು ಬದ್ಧವಾಗಿದೆ: ಸಂತೋಷ್ ಲಾಡ್.

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. “ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.

ಸಚಿವರು ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. “ಕಾರ್ಮಿಕರ ಕಾಯ್ದೆ, ಕಾನೂನಿನನ್ವಯ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಹಿತರಕ್ಷಣೆಗೆ ಸರ್ಕಾರವು ಬದ್ಧವಾಗಿದೆ” ಎಂದು ತಿಳಿಸಿದರು

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *