Breaking News

ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರೈತರ ಪ್ರತಿಭಟನೆ….

ಧಾರವಾಡ: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ಧಾರವಾಡದ ಬೆಳಗಾವಿ ರಸ್ತೆಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಪಂಪ್ಸೆಟ್ ಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮೊದಲು 7ತಾಸು ವಿದ್ಯುತ್ ಇರುತ್ತಿತ್ತು ಇದೀಗ 4ತಾಸಿಗೆ ವಿದ್ಯುತ್ ಕಡಿತ ಹಿನ್ನೆಲೆ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಹಿನ್ನೆಲೆ ವಿದ್ಯುತ್ ಕೇಂದ್ರಕ್ಕೆ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ನಂತರ ರೈತರೊಂದಿಗೆ ಹೆಸ್ಕಾಂ ಅಧಿಕಾರಿಗಳ ಮಾತುಕತೆ ನಡೆಸಿ ಪ್ರತಿಭಟನೆ‌ ಕೈ ಬಿಡುವಂತೆ ಅಧಿಕಾರಿಗಳ ಮನವಿ ಮಾಡಿದರೂ ಸಹ ಮನವಿಗೆ ಸ್ಪಂದಿಸದ ರೈತರು ಚಕ್ಕಡಿ ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ಮಾಡಿದ್ದಾರೆ

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *