Breaking News

ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ…

ಬೆಂಗಳೂರು: ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. 4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ಮನೆಗೆ ‌ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್‌ ಪ್ರಶ್ನಿಸಿದೆ.
ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ರಾಜ್ಯ ಘಟಕ, 135 ಸೀಟು ಗೆದ್ದಿದ್ದೇವೆ ಎನ್ನುವ ಧಿಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ಹೆಚ್‌ ಡಿ ದೇವೇಗೌಡ ಅವರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಎಲ್ಲೋ ಇದ್ದ ಕುಮಾರಸ್ವಾಮಿ ಅವರನ್ನು ಪಾಪರಾಜ್ಜಿಗಳಂತೆ ಬೆನ್ಹತ್ತಿ, ಆಮೇಲೆ ಕಾಡಿ ಬೇಡಿ ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ? ಎಂದು ಜೆಡಿಎಸ್‌ ಕೇಳಿದೆ.

ಅಭಯದ ಸಂಕೇತವೆಂದು ನಂಬಿದ್ದರು ಕುಮಾರಸ್ವಾಮಿ. ಆದರೆ, ಡಿ.ಕೆ.ಶಿವಕುಮಾರ್‌ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ ಎಂದು ಅವರಿಗೆ ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲಿ ‘ಕೈ’ ಎತ್ತಿದರು, ಮಂಡ್ಯದಲ್ಲೂ ‘ಕೈ’ ಎತ್ತಿದರು. ಬೆಂಗಳೂರು ಗ್ರಾಮಾಂತರದಲ್ಲೂ ‘ಕೈ’ ಎತ್ತಿದರು!! ಪಾಪ.. ಕುಮಾರಸ್ವಾಮಿ ಅವರು ನಂಬಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಮಾರಸ್ವಾಮಿಯವರು, ಅವರ ‘ಕೈ’ ಹಿಡಿದರು. ಮಂಡ್ಯದಲ್ಲಿ ಅದೇ ‘ಕೈ’ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿಕೊಂಡಿತು. ಇದೆಂತಾ ಕೈಚಳಕ? ಅವರ ಹಸ್ತವಾಸಿ ವಿಸ್ವಾಸಘಾತುಕಕ್ಕೇ ಹೆಸರುವಾಸಿ.. ಅಲ್ಲವೇ? ಎಂದು ಪ್ರಶ್ನಿಸಿದೆ. ಕುಮಾರಸ್ವಾಮಿ ಅವರ ಕಣ್ಣುಗಳಲ್ಲಿ ಕಣ್ಣೀರು ಬರುತ್ತದೆ, ನಿಜ. ಇಲ್ಲ ಎಂದವರು ಯಾರು? ಇನ್ನೊಬ್ಬರ ಕಣ್ಣಲ್ಲಿ ರಕ್ತ ಸುರಿಸುವ ಕೆಲಸವನ್ನು ಅವರೆಂದೂ ಮಾಡಿಲ್ಲ, ಅವರ ನಾಲಿಗೆ ಸತ್ಯದ ಕಡೆಗೆ ಹೊರಳಿದೆಯೇ ಹೊರತು, ಅಸತ್ಯದೆಡೆಗಲ್ಲ. ಅಣ್ಣಾ.. ಅಣ್ಣಾ ಎಂದ ಆಚಾರವಿಲ್ಲದ ಆ ನಾಲಿಗೆ, ಇಂಥಾ ನೀಚ ಬುದ್ಧಿ ಬಿಡುವುದು ಯಾವಾಗ? ಪಿಹೆಚ್ ಡಿ ಮಾಡೋದಕ್ಕೆ ಅವರಿಂತ ಉತ್ತಮ ಗೈಡ್‌ ಬೇರೆ ಸಿಕ್ಕಾರೆಯೇ ನಿಮಗೆ?

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *