ಹಿಂದುಳಿದ ವರ್ಗಗಳಲ್ಲಿ ಬರುವ ಮೊಗೇರ ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿಯ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿಯಡಿ ಸಹಾಯಕ ಕನ್ನಡ ಶಿಕ್ಷಕರ ಹುದ್ದೆ ಪಡೆಯಲು ಮುಂದಾಗಿದ್ದ ಆರೋಪಿ ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಉತ್ತರ ಕನ್ನಡದ ಭಟ್ಕಳ ತಾಲೂಕಿನ ಬೆಂಗೆರೆ ನಿವಾಸಿ ಸರಸ್ವತಿ ಪ್ರಕರಣದ ಆರೋಪಿ. ಅವರು ಸಲ್ಲಿಸಿದ್ದ ಕ್ರಿಮಿನಲ್ ಮೆಲ್ಮನವಿ ಅರ್ಜಿಯನ್ನು ನ್ಯಾ ಜೆ ಖಾಜಿ ಅವರಿದ್ದ ಏಕ ಸದಸ್ಯ ಪೀಠ ತಿರಸ್ಕರಿಸಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಮೊಗೇರ ಜಾತಿಗೆ ಸೇರಿದವರಾಗಿದ್ದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ತಪ್ಪೇಸಗಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ನಿರೀಕ್ಷಿಣ ಜಾಮೀನು ನೀಡಲಾಗಿದೆ ಎಂದು ನ್ಯಾಯ ಪೀಠ ಅಭಿಪ್ರಾಯ ಪಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





