ಚಿತ್ರದುರ್ಗ: ನಗರ ಹೊರವಲಯದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿ ಬಂದಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯಾಗಿದ್ದ ಪರಮಶಿವಯ್ಯ ಅವರಿಗೆ ಜಾಮೀನು ಸಿಕ್ಕಿದೆ.ಹಲವು ತಿಂಗಳಿನಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಪರಮಶಿವಯ್ಯ ಅವರು ಅಕ್ಟೋಬರ್ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನು ಮುರುಘಾ ಮಠದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಕಾರಾಗೃಹದಲ್ಲಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎಸ್‌ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಮೂರನೇ ಆರೋಪಿಯಾಗಿದ್ದರು. ಆರೋಪಿ ಪರಮಶಿವಯ್ಯ ಅವರನ್ನು 2022ರ ಅಕ್ಟೋಬರ್ 28ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹದಲ್ಲಿ ಇರಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





