ಈ ಬಾರಿಯ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಿತ್ತು. ಆದರೆ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇಲ್ಲದೆ ಸರಳವಾಗಿ ಈ ಪಂದ್ಯ ನಡೆದಿತ್ತು. ಆದರೆ ಉದ್ಘಾಟನಾ ಪಂದ್ಯ ತಾಣವಾದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮವನ್ನು ಬಿಸಿಸಿಐ ಹಮ್ಮಿಕೊಂಡಿದೆ. ಈ ವಿಚಾರವನ್ನು ಬಿಸಿಸಿಐ ಅಧಿಕೃತವಾಗಿ ‘ಎಕ್’ನಲ್ಲಿ ಹಂಚಿಕೊಂಡಿದೆ.
ಈ ಮನರಂಜನಾ ಕಾರ್ಯಕ್ರಮದ ಬಗ್ಗೆ ಬಿಸಿಸಿಐ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಭಾರತದ ಮೂವರು ಅಗ್ರ ಸಂಗೀತಗಾರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಅಭಿಮಾನಿಗಳ ಮನರಂಜಿಸಲಿದ್ದಾರೆ ಎನ್ನುವುದನ್ನು ಬಿಸಿಸಿಐ ಖಚಿತಪಡಿಸಿದೆ. ಅಕ್ಟೋಬರ್ 14 ಶನಿವಾರ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಆರಂಭಕ್ಕೂ ಮುನ್ನ ಈ ಕಾರ್ಯಕ್ರಮಗಳು ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





