ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಪಾವತಿ ಮಾಡಿಲ್ಲ. ಬಾಕಿ ಬಿಲ್ ಪಾವತಿಗೆ ಜಿಎಸ್‌ಟಿ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಹೊಸ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಗೆ ಹಲವು ಭಾಗ್ಯಗಳನ್ನೂ ಕರುಣಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 20 ಸಾವಿರ ಕೋಟಿ ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಬಾಕಿ ಬರಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ತನಿಖೆ ಹೆಸರಲ್ಲಿ ಬಾಕಿ ಹಣ ತಡೆಹಿಡಿಯಲಾಗಿದೆ. ಸರ್ಕಾರ ತನಿಖೆ ಅಂತ ಮೂರು ವರ್ಷ ಅವಧಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





