Breaking News

ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ ತಲುಪಿದೆ.

ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ಹೇಳಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *