2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆಲ್ಲಲು ಆಲ್‌ರೌಂಡರ್ ಯುವರಾಜ್ ಸಿಂಗ್ ಪಾತ್ರ ಬಹಳ ಪ್ರಮುಖವಾಗಿತ್ತು. ಅವರು ತಮ್ಮ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದ ಹಲವು ಪಂದ್ಯಗಳಲ್ಲಿ ಭಾರತ ಗೆಲ್ಲಲು ಸಹಾಯ ಮಾಡಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಕೂಡ ತಂಡಕ್ಕಾಗಿ ಆಡುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆದಿದ್ದರು.
ಈ ಬಾರಿ ವಿಶ್ವಕಪ್‌ನಲ್ಲಿ ಶುಭಮನ್ ಗಿಲ್ ಡೆಂಗ್ಯೂವಿನಿಂದ ಬಳಲುತ್ತಿದ್ದು, ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ ಇದೆ ಎನ್ನಲಾಗಿದೆ, ಅವರ ಚೇತರಿಕೆ ಮೇಲೆ ಆಡುವ ಬಗ್ಗೆ ನಿರ್ಧಾರವಾಗಲಿದೆ.
ಶುಭಮನ್ ಗಿಲ್ ಬಗ್ಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ, ಭಾರತ ಪಾಕಿಸ್ತಾನ ಪಂದ್ಯದಲ್ಲಿ ಶುಭಮನ್ ಗಿಲ್ ಆಡಬೇಕು ಎಂದು ಒತ್ತಾಯಿಸಿದ್ದಾರೆ. ಶುಭಮನ್ ಗಿಲ್ ಸದ್ಯ ನೆಟ್‌ನಲ್ಲಿ ಅಭ್ಯಾಸ ಮಾಡುತ್ತಿದ್ದು ನಾಳಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





