ರಾಯಚೂರು: ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.
ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ರಾಯಚೂರು ಜಿಲ್ಲಾ ಪ್ರವಾಸವನ್ನು ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶುಕ್ರವಾರ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ ಜಾಗಗಳ ಮೇಲೆ ಐಟಿ ದಾಳಿ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ ಚಂದ್ರು ಅವರು, ಹಿಂದಿನ ಬಿಜೆಪಿ ಸರ್ಕಾರ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

bigtvnews | Hubli Dharwad News | Kannada News | Karnataka News Hubli News | News In Hubli | Local news