ಹುಬ್ಬಳ್ಳಿಯ ಗೂಡ್ ಶೆಡ್ ರಸ್ತೆಯ ಮೇಲೆ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿ,500 ಗ್ರಾಂ ಗಾಂಜಾ ವಶಪಡಿಸಿಕೊದ್ದಿದ್ದು ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದು ವರಿದಿದೆ. ಧಾರವಾಡದ ಹೊಸ ಎಪಿಎಂಸಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆ ಧಾರವಾಡದಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

