ಬೆಂಗಳೂರು: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) ಅವರು ಸೋಮವಾರ ಲಿಂಗೈಕ್ಯರಾದರು. ಶ್ರೀಗಳ ಅಲಿಕೆಯಿಂದ ಅವರ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಗಣ್ಯರು ಶ್ರೀಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ಭಾನುವಾರ ಮಠದಲ್ಲಿರುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾದರು. ಈ ಸುದ್ದಿ ತಿಳಿಯುತ್ತಿದ್ದಂತೆ ಮಠದತ್ತ ಸಹಸ್ರಾರು ಭಕ್ತರು ದೌಡಾಯಿದರು. ಸದ್ಯ ದೂರದ ಊರುಗಳಿಂದ ಶ್ರೀಗಳ ಅಂತಿಮ ದರ್ಶನ ಪಡೆಯಲು ಮಠದತ್ತು ಭಕ್ತರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





