ನವದೆಹಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯು ನವೆಂಬರ್‌ನಲ್ಲಿ ನಡೆಯಲಿದೆ. ಈ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಲಿದೆ. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ ಎಂಬ ಅಂಶಗಳು ಸಮೀಕ್ಷೆಯಲ್ಲಿ ಹೊರಬಿದ್ದಿದೆ.
2018 ರ ಚುನಾವಣೆಯಲ್ಲಿ, ಕಾಂಗ್ರೆಸ್ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ, ಕಾಂಗ್ರೆಸ್ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು. 15 ತಿಂಗಳು ಅಧಿಕಾರ ನಡೆಸಿದ್ದ ಕಮಲ್ ನಾಥ್ ನೇತೃತ್ವದ ಸರ್ಕಾರವು ಪತನವಾಯಿತು. ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





