Breaking News

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿ…

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *