Breaking News

ಕೋಳಿ ಮಾಂಸ ಹಿಡಿದು ಬಸ್‌ ಹತ್ತಿದಕ್ಕೆ ಸಾರಿಗೆ ಬಸ್‌ನಲ್ಲಿ ಅವಾಂತರ ಸೃಷ್ಟಿ…

ಮಂಗಳೂರು: ಕೂಲಿ ಕಾರ್ಮಿಕನೊಬ್ಬ ಕೋಳಿ ಮಾಂಸ ಹಿಡಿದು ಬಸ್‌ ಹತ್ತಿದಕ್ಕೆ ಸಾರಿಗೆ ಬಸ್‌ನಲ್ಲಿ ಅವಾಂತರ ಸೃಷ್ಟಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.ಸುರೇಶ್ ಎನ್ನುವವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ನೀಡಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಅದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ನಿಜ ವಿವಾರ ತಿಳಿಸಿದಾಗ ಬಸ್‌ನಿಂದ ಇಳಿಯುವಂತೆ ನಿರ್ವಾಹಕ ಒತ್ತಾಯಿಸಿದ್ದಾರೆ.

ಕೋಳಿ ಮಾಂಸ ಬಸ್‌ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನಾಗಿದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್‌ನಿಂದ ಇಳಿಯಲು ಒಪ್ಪಲಿಲ್ಲ. ಇದೇ ವಿಚಾರಕ್ಕೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *