ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಗದಗದಿಂದ ಗಜೇಂದ್ರಗಡ ಹೊರಟಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ.
ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ನೆರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿ ಮೃತರ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





