Breaking News

ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು: ಲಾಡ್

ಧಾರವಾಡ : ಮೈಸೂರಿನಲ್ಲಿ 20 ಶಾಸಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು. ಈ ಕುರಿತು ನನಗೆ ಹೆಚ್ಚಿಗೆ ಗೊತ್ತಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ ಎನ್ನುವ ಆರೋಪ ವಿಚಾರವಾಗಿ 10 ವರ್ಷ ಬಿಜೆಪಿ ಅವರು ಕೇಂದ್ರದಲ್ಲಿ ಪೇಟಿಎಂ ಇದ್ದ ಹಾಗೆ ಅಲ್ಲವಾ ಎಂದು ಪ್ರಶ್ನಿಸಿದರು. ಅವರು ಚುನಾವಣೆ ಬಂದಾಗ ಆರೋಪ ಮಾಡುತ್ತಾರೆ ಎಂದು ತಿಳಿಸಿದರು.ರಾಜ್ಯದಲ್ಲಿ ಎಲ್ಲ ಕಾಮಗಾರಿಗಳಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ನೀರಾವರಿ ಯೋಜನೆಗಳಿಗೆ ಹಣವನ್ನು ಸರ್ಕಾರ ಕೊಟ್ಟಿದೆ. ಇನ್ನೂ ಮುಂದುವರೆದು ಹಂತಹಂತವಾಗಿ ಪ್ರಣಾಳಿಕೆ ಅನುಗುಣವಾಗಿ ನಾವು ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

Share News

About bigtvnews22

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *