ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ‘ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಕಾರ್ಯಕರ್ತರಿಗೆ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. ‘ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ’ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





