ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋರಮಂಗಲ ಸಮೀಪರ ಪಬ್ ನಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಇನ್ನೂ ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊರ್ವ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ಸಿಲಿಂಡರ್ ಸ್ಫೋಟದಿಂದ ಕೋರಮಂಗಲದ ಮಡ್ ಪೈಪ್ ಹುಕ್ಕಾ ಪಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸಲು ಹರಸಾಹಸಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





